ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು..!

0 26

ಕಡೂರು: ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ.‌


ಮೃತರನ್ನ ಹೊಸದುರ್ಗ ಮೂಲದ ಲೋಹಿತ್ (33) ಮತ್ತು ನಾಗರಾಜ್ (35) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಕಡೂರು‌ ಕಡೆ ಬೈಕ್ ಸವಾರರು ತೆರಳುತ್ತಿದ್ದರು‌.

ರಭಸವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು, ಸ್ಥಳದಲ್ಲೇ ಹೊತ್ತಿ ಉರಿದಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಡೂರು ಪೊಲೀಸ್ ಠಾಣೆಯ ಪಿಎಸ್​ಐ ಧನಂಜಯ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಘಟನೆ ಮನಗಂಡ ಪೊಲೀಸರು, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.

error: Content is protected !!