ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ..!
ಕಡೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದ ಘಟನೆ ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ನಡೆದಿದೆ.
ಕಡೂರು ಪಟ್ಟಣದ ಸಿ.ಪಿ.ಸಿ ಕಾಲೋನಿ ನಿವಾಸಿ ವಿಘ್ನೇಶ್ ಚಾಕು ಇರಿತಕ್ಕೊಳಗಾದ ಯುವಕ. ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ಘಟನೆ ವಿಘ್ನೇಶ್ ಗೆ 8 ಜನರ ಯುವಕರ ತಂಡಚೊಂದು ಚಾಕು ಇರಿದಿದೆ. ಗಂಭೀರ ಗಾಯಗೊಂಡ ವಿಘ್ನೇಶ್ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನ್ಯಕೋಮಿನ ಯುವಕರು ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.