ಕಡೂರು: ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ.
ಮೃತರನ್ನ ಹೊಸದುರ್ಗ ಮೂಲದ ಲೋಹಿತ್ (33) ಮತ್ತು ನಾಗರಾಜ್ (35) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಕಡೂರು ಕಡೆ ಬೈಕ್ ಸವಾರರು ತೆರಳುತ್ತಿದ್ದರು.
ರಭಸವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು, ಸ್ಥಳದಲ್ಲೇ ಹೊತ್ತಿ ಉರಿದಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಡೂರು ಪೊಲೀಸ್ ಠಾಣೆಯ ಪಿಎಸ್ಐ ಧನಂಜಯ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಘಟನೆ ಮನಗಂಡ ಪೊಲೀಸರು, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…