ತೋಟ ನೋಡಲು ಹೋಗಿ ನಾಪತ್ತೆಯಾಗಿದ್ದ ವೃದ್ದೆ ಶವವಾಗಿ ಪತ್ತೆ !

0 42

ಕಡೂರು : ಧಾರಾಕಾರ ಮಳೆಯಿಂದ ಜಲಾವೃತವಾಗಿದ್ದ ಅಡಿಕೆ ತೋಟ ನೋಡಲು ತೆರಳಿದ್ದ ವೃದ್ದೆ ಕಾಲು ಜಾರಿ ತಾಯಿಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಸಂಜೆ ತೋಟ ನೋಡಲು ತೆರಳಿದ್ದ ವೃದ್ಧೆ ಅಡಿಕೆ ತೋಟದ ಸಮೀಪ ಹರಿಯುತ್ತಿದ್ದ ತಾಯಿ ಹಳ್ಳಕ್ಕೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದರು. ನಂತರ ನಾಪತ್ತೆಯಾದ ವೃದ್ಧೆ ಶವಕ್ಕಾಗಿ ತೀವ್ರ ಹುಡುಗಾಟ ನಡೆಸಿದ್ದು, ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಇನ್ನು ಸಾವನಪ್ಪಿದ ವೃದ್ಧೆಯನ್ನ ರೇವಮ್ಮ (62) ಎಂದು ಗುರುತಿಸಲಾಗಿದೆ.

ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಸಮೀಪದ ತಾಯಿಹಳ್ಳ ಎಂಬ ಕೆರೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರಿಂದ ಅಡಿಕೆ ತೋಟ ಜಲಾವೃತಗೊಂಡಿತ್ತು. ನಂತರ ವೃದ್ಧೆ ರೇವಮ್ಮ ತೋಟವನ್ನು ವೀಕ್ಷಣೆ ಮಾಡಲು ಹೋದಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ.

ತಾಯಿ ಹಳ್ಳದ ಬಳಿ ವೃದ್ಧೆಯ ಚಪ್ಪಲಿ, ಉರುಗೋಲು ಪತ್ತೆಯಾಗಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಿ ಹುಡುಕಾಡ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.

error: Content is protected !!