8 ಸಾವಿರ ರೂ. ಲಂಚಕ್ಕೆ ಕೈಯೊಡ್ಡಿದ ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ !

0 175

ಡೂರು: ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ . ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.

ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ 8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

Leave A Reply

Your email address will not be published.

error: Content is protected !!