ಹೃದಯಾಘಾತ‌ ; ಎಎಸ್ಐ ಸಾವು !

0 6,866

ಕಳಸ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಿ.ಕೆ.ಮುರುಳಿಧರ್ ಇಂದು ಬೆಳಗಿನಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಭಾನುವಾರ ಬೆಳಗಿನಜಾವ ಮುರುಳಿಧರ್ ಅವರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಕಳಸ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಅವರು ಅಸುನೀಗಿದ್ದಾರೆ.


ಮೂಲತಃ ಬೀರೂರುನವರಾಗಿದ್ದ ಇವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave A Reply

Your email address will not be published.

error: Content is protected !!