Categories: Kalasa

ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ಮಧ್ಯ ರಾತ್ರಿವರೆಗೂ ಠಾಣೆಯಲ್ಲೇ ಕುಳಿತ ಮಹಿಳೆ ! ಕಾರಣವೇನು ?

ಕಳಸ: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ.


ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು.

ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಪಕ್ಕದ ಮನೆಯ ಯುವಕರು ತನ್ನೊಡನೆ ಅಸಭ್ಯ ವರ್ತನೆ ಮಾಡಿದ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಆದರೆ ಎಫ್.ಐ.ಆರ್. ದಾಖಲಾಗದೆ ಮನೆಗೆ ಹೋಗಲ್ಲವೆಂದು ಪಟ್ಟು ಹಿಡಿದ ಮಹಿಳೆ ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ಮಲಗಿಸಿದ್ದಾರೆ.

ಮಹಿಳೆಯ ಆಕ್ರೋಶ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿಯ ವೇಳೆಗೆ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಿದ್ದಾರೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ.

Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

13 mins ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

3 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

7 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

20 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

23 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

23 hours ago