ಮನೆಯೊಂದರ ಕೋಣೆಯಲ್ಲಿ ಬಚ್ಚಿಟ್ಟಿದ್ದ ಪರವಾನಗಿ ಇಲ್ಲದ ಬಂದೂಕು ವಶಕ್ಕೆ ; ಇಬ್ಬರ ವಿರುದ್ಧ ಪ್ರಕರಣ ದಾಖಲು

0 138

ಕಳಸ ; ಮನೆಯೊಂದರ ಕೋಣೆಯಲ್ಲಿ ಬಚ್ಚಿಟ್ಟಿದ್ದ ಪರವಾನಗಿ ಇಲ್ಲದ ಬಂದೂಕನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೆರೆ ಗ್ರಾಮದ ಕೊಂಡದಮನೆ ಎಂಬಲ್ಲಿ ನಡೆದಿದೆ.

ಆ. 27 ರಂದು ಖಚಿತ ಮಾಹಿತಿಯ ಮೇರೆಗೆ ಕಳಸ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಮಾವಿನಕೆರೆ ಗ್ರಾಮದ ಕೊಂಡದಮನೆಯಲ್ಲಿ ದಾಳಿ ನಡೆಸಿ, ಪರವಾನಗಿ ಇಲ್ಲದೇ ಮನೆಯ ಹಿಂಭಾಗದ ಕೋಣೆಯಲ್ಲಿ ಬಚ್ಚಿಟ್ಟಿದ್ದ ಒಂದು SBML ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.


ಬಂದೂಕನ್ನು ಕಾನೂನು ಬಾಹಿರವಾಗಿ ಹೊಂದಿದ್ದ ವ್ಯಕ್ತಿ ಮತ್ತು ಆ ಬಂದೂಕನ್ನು ಈ ವ್ಯಕ್ತಿಗೆ ಮಾರಾಟ ಮಾಡಿದ್ದ ಇನ್ನೋರ್ವ ವ್ಯಕ್ತಿಯ ವಿರುದ್ದ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!