ಸೂಕ್ತ ರಸ್ತೆ ಇಲ್ಲದೆ ವೃದ್ಧೆಯನ್ನ ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು !

0 112

ಕಳಸ : ಸೂಕ್ತ ರಸ್ತೆ ಇಲ್ಲದೆ ವಯೋವೃದ್ಧೆಯನ್ನ ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಇಲ್ಲಿ ಇಂದಿಗೂ ಜೀವಂತವಾಗಿದೆ.

ತಾಲೂಕಿನ ಕಲ್ಕೋಡು ಗ್ರಾಮದಲ್ಲಿ 70 ವರ್ಷದ ಶೇಷಮ್ಮರನ್ನ ಕುಟುಂಬಸ್ಥರು ಸುಮಾರು 1 ಕಿ.ಮೀ. ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೂಕ್ತ ರಸ್ತೆ ಇಲ್ಲದ ಕಾರಣ ಜೋಳಿಗೆಯಲ್ಲಿ ಹೊತ್ತು ತಂದಿದ್ದಾರೆ. ಕಲ್ಕೋಡು ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆ, 30-40 ಜನಸಂಖ್ಯೆಯ ಕಾಡಂಚಿನ ಕುಗ್ರಾಮಗಳಿವೆ. ಆದರೆ ಓಡಾಡಲು ಸೂಕ್ತ ರಸ್ತೆ ಇಲ್ಲ.

ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದ್ರೆ 4 ಕಿ.ಮೀ. ಆಗುತ್ತದೆ.3-4 ಕಿ.ಮೀ. ಬಂದ್ರೆ ಆಟೋ ಸಿಗುತ್ತೆ, ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡ್ತಿಲ್ಲ. ಮುಕ್ಕಾಲು ಕಿ.ಮೀ. ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು, ಜನನಾಯಕರು ಈವರೆಗೂ ಯಾರೂ ಕೂಡ ಸ್ಪಂದಿಸಿಲ್ಲ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Leave A Reply

Your email address will not be published.

error: Content is protected !!