ಕೊಪ್ಪ : ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ ಘಟನೆ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ್ದಾರೆ.
ರಸ್ತೆ ಅಗಲೀಕರಣ, ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಮಳೆಯಿಂದ ಕುಸಿದ 17 ಮನೆಗಳ ಸ್ಥಳಾಂತರಕ್ಕೂ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂದು ಚುನಾಯಿತ ಸದಸ್ಯರು ಬೇಸರಿಸಿದ್ದಾರೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.
ಯಾವ ಕೆಲಸವೂ ಆಗುತ್ತಿಲ್ಲ, ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ನಿಮ್ಮ ನಿರ್ಲಕ್ಷ್ಯಕ್ಕೆ ನಮ್ಮ ಉತ್ತರ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಮಂದಿ ಸದಸ್ಯರು ತಾಲೂಕು ಪಂಚಾಯತಿ ಇಓ ಗೆ ರಾಜೀನಾಮೆ ಪತ್ರ ನೀಡಿದ್ದಾರೆ.