ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

0 167

ಕೊಪ್ಪ : ಇಲ್ಲಿನ ಬಿಜಿಎಸ್ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಶ್ರೀನಿವಾಸ್ (15) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ವಿದ್ಯಾರ್ಥಿ ಕಂದಾಯ ಇಲಾಖೆಯಲ್ಲಿ ವಿಎ ಆಗಿ ಕಡೂರಿನಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ‌ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ಶ್ರೀನಿವಾಸ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ.

ಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

Leave A Reply

Your email address will not be published.

error: Content is protected !!