ಕೊಪ್ಪ: ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹರಿಹರಪುರ ಸಮೀಪದ ನಿಲುವಾಗಿಲು ಬಳಿ ನಡೆದಿದೆ.
ಕೊಡಿಗೆಬೈಲು ನಿವಾಸಿ ಸುಂದರ್ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ರೈಸ್ ಮಿಲ್ ಒಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೋಮವಾರ ಬೆಳಿಗ್ಗೆ ಎಂದಿನಂತೆ ಇವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ನಿಲುವಾಗಿಲು ಬಿಕ್ಕಳಿ ರಸ್ತೆಯ ಬಳಿ 250 ಕ್ಕೂ ಹೆಚ್ಚು ಹೆಜ್ಜೇನು ಹುಳುಗಳು ದಾಳಿ ನಡೆಸಿವೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.