ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಬಿಗ್ ಶಾಕ್ ! ಬಂಧನದ ಭೀತಿಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ

0 3

ಮೂಡಿಗೆರೆ : ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಬರುತ್ತಿದ್ದು, ಇದೀಗ ಬಂಧನ ಭೀತಿ ಎದುರಾಗಿದೆ. ಚೆಕ್ ಬೌನ್ಸ್ ಕೇಸಲ್ಲಿ ಸಂಕಷ್ಟ ಎದುರಾಗಿದ್ದು ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಎಂ.ಪಿ. ಕುಮಾರಸ್ವಾಮಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ನೋಟಿಸ್ ನೀಡಲಾಗಿದೆ.

30 ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು, 1 ಕೋಟಿ 38 ಲಕ್ಷದ 65 ಸಾವಿರದ 8 ಚೆಕ್ ಬೌನ್ಸ್ ಕೇಸ್ ನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿತ್ತು. 30 ದಿನದ ಒಳಗೆ ಹಣ ಮರು ಪಾವತಿ ಮಾಡುವಂತೆ ಕೋರ್ಟ್ ಹೇಳಿತ್ತು.

ಕುಮಾರಸ್ವಾಮಿ ಅವರ ವಿರುದ್ಧ ಚಿಕ್ಕಮಗಳೂರು ಮೂಲದ ಹೂವಪ್ಪಗೌಡ 8 ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ದೂರು ನೀಡಿದ್ದರು. ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ನಲ್ಲಿ ಮೂರು ವರ್ಷದಿಂದ ಪ್ರಕರಣ ನಡೆಯುತ್ತಿತ್ತು.

Leave A Reply

Your email address will not be published.

error: Content is protected !!