ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಕೊಲೆಗೈದ ಪತಿರಾಯ ! ಪ್ರಕರಣ ಮುಚ್ಚಿಹಾಕಲು ಈತ ಮಾಡಿದ್ದೇನು ಗೊತ್ತಾ ?

0 28

ಮೂಡಿಗೆರೆ : ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ, ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿ ಶವಸಂಸ್ಕಾರಕ್ಕೆ ತಯಾರು ನಡೆಸುತ್ತಿದ್ದ ಪತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಕ್ಕಿ ಎಂಬಲ್ಲಿ ಈ ಘಟನೆ ನಡೆದಿದೆ. ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಲೀಲಾಬಾಯಿ (38) ಮೃತಪಟ್ಟ ದುರ್ದೈವಿ. ಕಲ್ಲಕ್ಕಿ ಎಸ್ಟೇಟ್ ಲೈನಿನಲ್ಲಿ ದಾವಣಗೆರೆ ಮೂಲದ ಶಿವ ಹಾಗೂ ಪತ್ನಿ ಲೀಲಾಬಾಯಿ ಕಾರ್ಮಿಕರಾಗಿ ಎರಡು ವರ್ಷದಿಂದ ತೋಟದ ಕೆಲಸಕ್ಕೆ ಸೇರಿದ್ದರು. ಆಕೆಯ ಪತಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡಿದಿದ್ದು ಪತ್ನಿ ಲೀಲಾಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಬೆಳಿಗ್ಗೆ ತನ್ನ ಪತ್ನಿ ಸಹಜ ಸಾವಾಗಿದೆ ಎಂದು ತೋಟದ ವ್ಯವಸ್ಥಾಪಕರಿಗೆ ತಿಳಿಸಿದ್ದು ಸಾಕ್ಷ್ಯ ನಾಶ ಮಾಡಲು ಪತ್ನಿಯ ರಕ್ತಸಿಕ್ತ ಸೀರೆ ಬದಲಾಯಿಸಿ ಅನುಮಾನ ಬಾರದಂತೆ ಅಂತ್ಯಸಂಸ್ಕಾರ ಮಾಡಲು ಪತಿ ಶಿವ ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಅನುಮಾನಗೊಂಡ ತೋಟದ ಮೇಲ್ವಿಚಾರಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳ ಮಹಜರು ನಡೆಸಿ ಆರೋಪಿ ಶಿವ ಎಂಬುವವನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಆರೋಪಿ ಬಾಯ್ಬಿಟ್ಟಿದ್ದಾನೆ.

ಸ್ಥಳಕ್ಕೆ ಎಸ್ಪಿ ಉಮಾ  ಪ್ರಶಾಂತ್, ಮೂಡಿಗೆರೆ ಸರ್ಕಲ್ ಇನ್ಸ್‌ಪೆಕ್ಟರ್ ಸೋಮೇಗೌಡ, ಬಾಳೂರು ಸಬ್ಇನ್ಸ್‌ಪೆಕ್ಟರ್ ವಿ.ಶ್ರೀನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಶವಾಗಾರಕ್ಕೆ ಸಾಗಿಸಲು ಜಾವಳಿಯ ಧರ್ಮಸ್ಥಳ ಶೌರ್ಯ ರಾಷ್ಟ್ರೀಯ ವಿಪತ್ತು ಘಟಕದ ಸದಸ್ಯರು ಸಹಕರಿಸಿದರು. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Leave A Reply

Your email address will not be published.

error: Content is protected !!