Categories: Mudigere

ಇದು ಬಜರಂಗದಳದವರ ಮನೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿ ಬಿಡಲಾಗುವುದು !

ಮೂಡಿಗೆರೆ: ಮಲೆನಾಡಿನ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ಅವರ ಮೇಲೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್‌ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. 

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳದ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ʻʻಇದು ಬಜರಂಗದಳದವರ ಮನೆ. ಕಾಂಗ್ರೆಸ್ಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ನಾಯಿಯನ್ನು ಬಿಡಲಾಗುವುದುʼʼಎಂಬ ಎಚ್ಚರಿಕೆ ಬೋರ್ಡ್ ಹಾಕಿದ್ದಾರೆ. 

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಿದೆ. ದತ್ತಪೀಠದ ಹೋರಾಟ ಆರಂಭಗೊಂಡ ಮೇಲೆ ಮಲೆನಾಡು ಭಾಗದಲ್ಲಿ ಹಿಂದೂ ಸಂಘಟನೆ ಮತ್ತಷ್ಟು ಗಟ್ಟಿಯಾಗಿತ್ತು. ಇದೀಗ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕೆಂಡವಾಗಿರೋ ಬಜರಂಗದಳ ನಾನಾ ರೀತಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

11 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

13 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

14 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

15 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

16 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

18 hours ago