ಎರಡು KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕರಿಗೆ ಗಂಭೀರ ಗಾಯ ; ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್

0 100

ಮೂಡಿಗೆರೆ : ದಡ್ಡವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್‌ಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಾಗಾರಿಯೇ ಕಾರಣ ಎಂದು ಹೇಳಲಾಗುತ್ತಿದೆ. 2019ರಲ್ಲಿ ಕುಸಿದಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣವಾಗದೇ ಇರುವುದರಿಂದ ಆಕ್ರೋಶಗೊಂಡಿರುವ ವಾಹನ ಸವರಾರರು, ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಿದ್ದಾರೆ.

ಅಪಘಾತಕ್ಕೆ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣವಾಗಿದೆ. ಹೌದು, ದಟ್ಟವಾಗಿ ಮಂಜು ಆವರಿಸಿದ್ದು, ಅಡಿ ದೂರದಲ್ಲಿ ಇರುವವರೇ ಕಾಣದಂತಹಾ ಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವರಾರರು ಪರದಾಟ ನಡೆಸುವಂತಾಯಿತು. ಕೆಲವು ಪ್ರಯಾಣಿಕರು 10 ಕಿ.ಮೀ.‌ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

Leave A Reply

Your email address will not be published.

error: Content is protected !!