Categories: Mudigere

ಕಾಡಾನೆ ದಾಳಿಗೆ ವ್ಯಕ್ತಿ ಬಲಿ…!!

ಮೂಡಿಗೆರೆ: ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಅರೆನೂರು ಗ್ರಾಮದಲ್ಲಿ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ನಡೆದಿದೆ.

ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ. ಸ್ಥಳಿಯರು ಸ್ಥಳಕ್ಕೆ ಭೇಟಿ ನೀಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮೂಡಿಗೆರೆ ತಾಲೂಕಿನಲ್ಲಿ ಆನೆ ಕಾರ್ಯಪಡೆ ಸ್ಥಾಪನೆಗೊಂಡ ಬಳಿಕ ಕಾಡಾನೆಗಳು ಕಾಫಿತೋಟಕ್ಕೆ ದಾಳಿ ಇಟ್ಟು ಬೆಳೆ ನಾಶ ಮಾಡಿರುವ ಘಟನೆಗಳು ನಡೆದಿದ್ದವು. ಆನೆ ಕಾರ್ಯಪಡೆ ಮನುಷ್ಯ ಮತ್ತು ಪ್ರಾಣಿ ಸಂಘರ್ಷಕ್ಕೆ ತಡೆ ಒಡ್ಡಿತ್ತು. ಈ ನಡುವೆ ಭಾನುವಾರ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿರುವುದು ಮಲೆನಾಡಿಗಳಲ್ಲಿ ಮತ್ತೆ ಕಾಡಾನೆ ಭೀತಿ ಮೂಡಿಸಿದೆ.

ಮೂಡಿಗೆರೆಯಲ್ಲಿ 2 ವರ್ಷದಲ್ಲಿ 6ಕ್ಕೂ ಹೆಚ್ಚು ಜನರು ಆನೆ ದಾಳಿಗೆ ಬಲಿಯಾಗಿದ್ದಾರೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago