Categories: Mudigere

ಮುಸ್ಲಿಂ ಯುವತಿ ಜೊತೆ ಸ್ನೇಹ ಬೆಳೆಸಿದ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಮೂಡಿಗೆರೆ : ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಬಿಜೆಪಿ, ಭಜರಂಗದಳದ ಹಿಂದೂ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಹಿನ್ನೆಲೆ 30 ಜನ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. ಯುವತಿಯ ಜೊತೆ ರಸ್ತೆಯಲ್ಲಿ ಹೋಗುವಾಗ 30 ಯುವಕರ ಗುಂಪು ಹಿಂದೂ ಕಾರ್ಯಕರ್ತನ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅಜಿತ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಅನ್ಯಕೋಮಿನ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್‌ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟ ದಿನದಿಂದ ಇದು ಎರಡನೇ ಘಟನೆಯಾಗಿದೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

13 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

15 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

16 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

16 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

17 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

20 hours ago