Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು !

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿದ ಡಸ್ಟರ್ ಕಾರೊಂದು (KA18 P 5859) ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ನಾಲ್ಕು ಚಕ್ರ ಮೇಲಾಗಿ ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ತಾಲೂಕಿನ ಗಬ್ಗಲ್ ನಲ್ಲಿ ನಡೆದಿದೆ.

ತಾಲೂಕಿನ ಸಾರುಗೋಡು ಗ್ರಾಮದ ವ್ಯಕ್ತಿಯ ಕಾರು ಇದಾಗಿದ್ದು ಕೊಟ್ಟಿಗೆಹಾರ – ಬಾಳೆಹೊನ್ನೂರು ಮಾರ್ಗದ ಗಬ್ಗಲ್ ಬಳಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಸಣ್ಣ-ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಚಾಲಕ ನಿದ್ದೆ ಮಂಪರಿನಲ್ಲಿದ್ದುದ್ದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Articles

error: Content is protected !!