ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
ಮಾ. 5ರಂದು ಆಚರಿಸಲು ಸರ್ಕಾರ ಆದೇಶ

0 11

ಎನ್.ಆರ್ ಪುರ: ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಪ್ರತಿ ವರ್ಷ ಮಾರ್ಚ್ 16ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಚರಿಸುವಂತೆ ಕಳೆದ ವರ್ಷ ಮಾಡಿದ ಆದೇಶವನ್ನು ತಿದ್ದುಪಡಿ ಮಾಡಿ ಸರ್ಕಾರ ದಿನಾಂಕ 28-2-2023ರಂದು ಆದೇಶ ಹೊರಡಿಸಿದೆ.

ಸರ್ಕಾರಿ ಆದೇಶ ಸಂಖ್ಯೆ ಕಸಂವಾ 114 ಕಸಧ 2022(ಭಾಗ-2)ರ ಆದೇಶದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಫಾಲ್ಗುಣ ಶುದ್ಧ ತ್ರಯೋದಶಿಯಂದು (2023ನೇ ಸಾಲಿನಲ್ಲಿ ದಿನಾಂಕ 5-3-2023ರಂದು) ಎಂದು ತಿದ್ದಿ ಓದಿಕೊಳ್ಳತಕ್ಕದ್ದೆಂದು ಸೂಚಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಿಯೊಂದಿಗೆ ಸದರಿ ಆದೇಶವನ್ನು ಜಾರಿ ಮಾಡಲಾಗಿದೆ.

Leave A Reply

Your email address will not be published.

error: Content is protected !!