ಹೊಟ್ಯಾಪುರ ಗಿರಿಸಿದ್ದೇಶ್ವರ ಶಿವಾಚಾರ್ಯರ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

0 18

ಎನ್.ಆರ್.ಪುರ : ಹೊನ್ನಾಳಿ ತಾಲೂಕ ಹೊಟ್ಯಾಪುರ ಹಿರೇಮಠದ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.


ಗಿರಿಸಿದ್ಧೇಶ್ವರ ಶಿವಾಚಾರ್ಯರು ವೀರಶೈವ ಧರ್ಮ ಸಂಸ್ಕೃತಿ ಪ್ರಸಾರ ಮಾಡುತ್ತಾ ಆ ಭಾಗದ ಭಕ್ತ ಸಂಕುಲಕ್ಕೆ ಸನ್ಮಾರ್ಗ ದರ್ಶನ ಮಾಡುತ್ತಿದ್ದರು. ಶ್ರೀ ರಂಭಾಪುರಿ ಜಗದ್ಗುರುಗಳವರ ಹಲವಾರು ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಶೀರ್ವಾದ ಪಡೆದಿದ್ದನ್ನು ಮರೆಯುವಂತಿಲ್ಲ. ಸ್ನೇಹಜೀವಿಗಳಾಗಿದ್ದ ಅವರು ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲಿಕೆ ನೋವನ್ನುಂಟು ಮಾಡಿದೆ. ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಅಗಲಿದ ಅವರ ಪವಿತ್ರ ಆತ್ಮಕ್ಕೆ ಚಿರಶಾಂತಿ ನೀಡಲಿ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಶ್ರೀ ಮಠದ ಭಕ್ತರಿಗೆ ನೀಡಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!