Categories: N.R pura

ಒಳ್ಳೆಯ ವ್ಯಕ್ತಿತ್ವವೇ ಮನುಷ್ಯನ ನಿಜವಾದ ಆಸ್ತಿ ; ಶ್ರೀ ರಂಭಾಪುರಿ ಜಗದ್ಗುರುಗಳು

ಎನ್‌.ಆರ್.ಪುರ: ಧರ್ಮದಿಂದ ನಡೆದರೆ ಧರ್ಮ ನಮ್ಮನ್ನು ಕಾಪಾಡುತ್ತದೆ. ಹಣ ನೋಡಿ ಕೊಡುವ ಬೆಲೆ ಆಸ್ತಿ ನೋಡಿ ಒಂದಾಗುವ ಬಂಧುಗಳು ಹೆಚ್ಚು ಕಾಲ ನಮ್ಮೊಂದಿಗೆ ಉಳಿಯುವುದಿಲ್ಲ. ಒಳ್ಳೆಯ ವ್ಯಕ್ತಿತ್ವವೇ ಮನುಷ್ಯನ ನಿಜವಾದ ಆಸ್ತಿ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಸೋಮವಾರ ಶ್ರೀ ರಂಭಾಪುರಿ ಪೀಠದಲ್ಲಿ ನಾಗರ ಪಂಚಮಿಯಂದು ನಾಗರಕಟ್ಟೆಗೆ ಹಾಲೆರೆದು ಶ್ರಾವಣ ಸಂಜೆ ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.


ಸಂಪ್ರದಾಯ ಪರಂಪರೆಗಳು ಮಾನವನ ಶ್ರೇಯಸ್ಸಿಗಾಗಿ ಇವೆ ಹೊರತು ಅವನತಿಗಲ್ಲ. ಪ್ರಾಚೀನ ಆದರ್ಶ ಚಿಂತನಗಳನ್ನು ಮೈಗೂಡಿಸಿಕೊಂಡು ಬಾಳಿದರೆ ಜೀವನದಲ್ಲಿ ಶಾಂತಿ ನೆಲೆಸಲು ಸಾಧ್ಯ. ಬದುಕು ಬದಲಾಯಿಸಬೇಕು ಎಂದುಕೊಂಡಿದ್ದರೆ ಅದಕ್ಕಾಗಿ ಹಣ ಬೇಡ. ಯೋಜನೆ ಬದಲಾದರೆ ಸಾಕು. ಭಗವಂತನ ಕೈಯಲ್ಲಿ ಎಲ್ಲಾ ಇರುತ್ತದೆ. ಆದರೂ ಸುಮ್ಮನಿರುತ್ತಾನೆ. ಮನುಷ್ಯನ ಕೈಯಲ್ಲಿ ಏನೂ ಇಲ್ಲ. ಆದರೂ ಎಲ್ಲವೂ ಇದೆ ಅನ್ನುವ ಭ್ರಮೆಯಲ್ಲಿರುತ್ತಾನೆ. ಬೆಳಕನ್ನು ಕಾಣಲು ಇಡೀ ರಾತ್ರಿ ಕಾಯಬೇಕು. ಸಂತೋಷವನ್ನು ಕಾಣಲು ಕಷ್ಟಗಳನ್ನು ಎದುರಿಸಲೇಬೇಕಾಗುತ್ತದೆ. ಮನುಷ್ಯ ಆಸೆಗಳಿಗಾಗಿ ಬದುಕಬಾರದು. ಆದರ್ಶಕ್ಕಾಗಿ ಬದುಕಬೇಕೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ್ದಾರೆ. ದೀರ್ಘವಾದ ಜೀವನವಷ್ಟೇ ಮುಖ್ಯವಲ್ಲ. ದಿವ್ಯವಾದ ಜೀವನ ಮುಖ್ಯವೆಂದರು.


ಪುರಾಣ ಪ್ರವಚನ ಮಾಡಿದ ಮಾದನ ಹಿಪ್ಪರಗಿ ಹಿರೇಮಠದ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ತಮ್ಮ ಪ್ರವಚನದಲ್ಲಿ ತಿಂದ ಅನ್ನ ಶಾಶ್ವತವಾಗಿ ಯಾರ ಹೊಟ್ಟೆಯಲ್ಲಿ ಇರುವುದಿಲ್ಲ. ಆದರೆ ಹಸಿವು ನೀಗಿಸಿದ ಆ ಘಳಿಗೆಯನ್ನು ಅರಿತವರು ಎಂದೂ ಮರೆಯಲಾರರು. ಹಿಂದೆ ಜನರ ಬಟ್ಟೆ ಕೊಳೆಯಾಗಿರುತ್ತಿದ್ದರೂ ಮನಸ್ಸು ಸ್ವಚ್ಛವಾಗಿತ್ತು. ಆದರೆ ಈಗ ಬಟ್ಟೆಗಳು ಸ್ವಚ್ಛವಾಗಿವೆ ಆದರೆ ಮನಸ್ಸು ಕೊಳೆಯಾಗಿವೆ. ಆತ್ಮ ಸಾಕ್ಷಿಗೆ ಅನುಗುಣವಾಗಿ ನಾವಿದ್ದರೆ ಯಾರ ಮುಂದೆ ತಲೆ ತಗ್ಗಿಸುವ ಅವಶ್ಯಕತೆ ಇರುವುದಿಲ್ಲ ಎಂಬುದನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ತಮ್ಮ ಸತ್ಕ್ರಾಂತಿಯ ಮೂಲಕ ಜನ ಸಮುದಾಯವನ್ನು ಉದ್ಧರಿಸಿದ್ದಾರೆ ಎಂದರು.

ರಾಯಚೂರು ಕಿಲ್ಲೆ ಬ್ರಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸತ್ಕಥಾ ಶ್ರವಣ ಮಾಡುವುದೇ ನಿಜವಾದ ಶ್ರಾವಣ. ಒಳ್ಳೆಯದನ್ನು ಕೇಳಿ ಅದೇ ದಾರಿಯಲ್ಲಿ ಮುನ್ನಡೆವ ಪ್ರಯತ್ನ ಮಾಡಬೇಕೆಂದರು.


ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ ಮತ್ತು ಸ್ವಾಗತ ಗೀತೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.
ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳು ಭಕ್ತ ಸಮುದಾಯದ ಸಮ್ಮುಖದಲ್ಲಿ ನಾಗರಕಟ್ಟೆಗೆ ಹಾಲೆರೆದು ಸಾಂಪ್ರದಾಯಕ ಪೂಜೆ ಸಲ್ಲಿಸಿದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago