Categories: N.R pura

ಬದುಕು ಕೊಟ್ಟ ಭಗವಂತನನ್ನು ಮರೆಯದಿರು ; ಶ್ರೀ ರಂಭಾಪುರಿ ಜಗದ್ಗುರುಗಳು

ಎನ್.ಆರ್.ಪುರ : ಭಗವಂತನ ಸೃಷ್ಠಿ ಅದ್ಭುತ. ಅವನು ಕೊಟ್ಟ ಕೊಡುಗೆ ಅಮೂಲ್ಯ. ಏನೆಲ್ಲವನ್ನು ಕೊಟ್ಟ ಭಗವಂತನನ್ನು ಮರೆಯದೇ ದಿನದಲ್ಲಿ ಎರಡು ನಿಮಿಷ ನೆನಪಿಸಿಕೊಂಡರೆ ಜೀವನ ಸಾರ್ಥಕಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.


ಅವರು ಶ್ರಾವಣ 2ನೇ ಸೋಮವಾರ ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮನುಷ್ಯನ್ಲಿರುವ ಸಿಟ್ಟು ಅವಗುಣಗಳನ್ನು ಹೊರ ಹಾಕಿದರೆ ತಾಳ್ಮೆ ಎಂಬುದು ಒಳ್ಳೆಯ ಸಂಗತಿಗಳನ್ನು ಒಳಗೊಂಡಿರುತ್ತದೆ. ಅರ್ಥ ಮಾಡಿಕೊಳ್ಳುವ ಮನಸ್ಸು, ಕೈ ಜೋಡಿಸುವ ಸ್ನೇಹ, ಕ್ಷಮಿಸುವ ಗುಣ, ಸಮಾಧಾನ ಮಾಡುವ ಒಂದು ಹೃದಯ ಇವುಗಳೇ ಮನುಷ್ಯನ ನಿಜವಾದ ಆಸ್ತಿಗಳಾಗಿವೆ. ಕಾರ್ಯ ನಿರ್ವಹಿಸುವುದೊಂದೇ ನಮ್ಮ ಗುರಿಯಾಗಬೇಕು. ಜನ ಹೊಗಳಲಿ ಹೊಗಳದಿರಲಿ, ಯಶಸ್ಸು ಸಿಗಲಿ ಸಿಗದಿರಲಿ ಅದನ್ನು ಲೆಕ್ಕಿಸದೇ ಕಾರ್ಯ ನಿರ್ವಹಿಸು. ಫಲಾನುಫಲಗಳನ್ನು ಕೊಡುವುದು ಭಗವಂತನಿಗೆ ಸೇರಿದ್ದು. ಕಷ್ಟಗಳು ಬರುವುದು ಸುಖಾಗಮನದ ಹೆಗ್ಗುರುತು. ಕಷ್ಟಗಳು ಬರುವುದು ಮುಳುಗಿಸಲಿಕ್ಕಲ್ಲ. ಅವು ತೊಳೆದು ಶುಭ್ರಗೊಳಿಸುವುದಕ್ಕೆ ಎಂಬುದನ್ನು ನೆನಪಿಡಬೇಕಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ನೊಂದವರ ಬೆಂದವರ ಬಾಳಿಗೆ ಬಲವನ್ನು ತಂದು ಕೊಟ್ಟಿರುವುದನ್ನು ಇತಿಹಾಸದ ಪುಟಗಳಿಂದ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ವೀರಶೈವ ಧರ್ಮದಲ್ಲಿರುವ ಆಧ್ಯಾತ್ಮ ಸಂಪತ್ತು ಸಿದ್ಧಾಂತ ಶಿಖಾಮಣಿ ಅಮೂಲ್ಯ ಗ್ರಂಥದಲ್ಲಿ ನಿರೂಪಿಸಲ್ಪಟ್ಟಿದೆ ಎಂದರು.


“ಶ್ರೀ ಜಗದ್ಗುರು ರೇಣುಕ ವಿಜಯ” ಪುರಾಣ ಪ್ರವಚನ ಮಾಡಿದ ಮಾದನ ಹಿಪ್ಪರಗಿ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಶ್ರೀ ಜಗದ್ಗುರು ರೇಣುಕಾಚಾರ್ಯರು ಮಾಡಿದ ಧಾರ್ಮಿಕ ಮತ್ತು ಸಾಮಾಜಿಕ ಸತ್ಕ್ರಾಂತಿ ಎಲ್ಲ ಕ್ರಾಂತಿಗಳ ಮೂಲ ಸೆಲೆಯಾಗಿದೆ. ಜನಮನದಲ್ಲಿರುವ ದುಷ್ಟ ಪ್ರವೃತ್ತಿಗಳನ್ನು ದೂರ ಮಾಡಿ ಸಾತ್ವಿಕ ಶಕ್ತಿಯನ್ನು ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.


ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ, ಗಂಗಾಧರ ಹಿರೇಮಠ ಇವರಿಂದ ಪ್ರಾರ್ಥನೆೆ ಜರುಗಿತು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು. 6 ಜನ ವೀರಮಹೇಶ್ವರ ವಟುಗಳಿಗೆ ಶಿವದೀಕ್ಷಾ ಅಯ್ಯಾಚಾರ ಜರುಗಿತು.


ಪ್ರಾಥಃಕಾಲ ಶ್ರೀ ಪೀಠದ ಎಲ್ಲ ದೈವಗಳಿಗೆ ಶ್ರಾವಣ ಸೋಮವಾರದ ವಿಶೇಷ ಅಲಂಕಾರ ಮಾಡಲಾಗಿತ್ತು. ಲೋಕ ಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ಮಾಡಿ ಭಕ್ತ ಸಮೂಹಕ್ಕೆ ಶುಭ ಹಾರೈಸಿದರು.

ಗದುಗಿನ ರಾಜು ಮಲ್ಲಾಡದ, ಸೋಲ್ಲಾಪುರ ಜಿಲ್ಲೆ ಅಕ್ಕಲಕೋಟೆಯ ಸುಧೀರ ಭಾರತಿ ದಂಪತಿಗಳು, ಬ್ಯಾಡಗಿಯ ರವೀಂದ್ರ ಸುನಂದಾ ದಂಪತಿಗಳು, ಅಮ್ಮಿನಬಾವಿ ಸದ್ಭಕ್ತರು ಹಾಗೂ ಶಿವಮೊಗ್ಗ ಜಿಲ್ಲೆಯ ಭಕ್ತರು ಮಹಾಪೂಜೆಯಲ್ಲಿ ಪಾಲ್ಗೊಂಡಿದ್ದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago