Categories: N.R pura

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲ್ಯಾಣ ಮಂಟಪ ಲೋಕಾರ್ಪಣೆ

ಎನ್.ಆರ್ ಪುರ: ಶ್ರೀಮದಭಿನವ ರೇಣುಕಾ ಮಂದಿರ ಟ್ರಸ್ಟ್‌ನಿಂದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನ ಅತ್ಯಂತ ಸುಂದರವಾಗಿ ಮತ್ತು ಭವ್ಯವಾಗಿ ನಿರ್ಮಾಣಗೊಂಡಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹರುಷ ವ್ಯಕ್ತಪಡಿಸಿದರು.
ಅವರು ಗುರುವಾರ ದಾವಣಗೆರೆಯಲ್ಲಿ ನೂತನ ಸಭಾಭವನದಲ್ಲಿ ವಾಸ್ತು ಶಾಂತಿ ಮತ್ತು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು.


ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದ ವಿಶ್ವ ಬಂಧುತ್ವದ ಆದರ್ಶ ಮೌಲ್ಯಗಳನ್ನು ಎತ್ತಿ ಹಿಡಿದ ವೀರಶೈವ ಧರ್ಮದ ಇತಿಹಾಸ ಪರಂಪರೆ ಅಮೂಲ್ಯವಾದುದು. ಶರವೇಗದಲ್ಲಿ ಬೆಳೆಯುತ್ತಿರುವ ದಾವಣಗೆರೆ ನಗರದಲ್ಲಿ ಶ್ರೀಮದಭಿನವ ರೇಣುಕಾ ಮಂದಿರವಿದ್ದು ಇಲ್ಲಿ ಶ್ರೀ ಪೀಠದ ಜಗದ್ಗುರು ತ್ರಯರು ಪಾದವಿನ್ಯಾಸಗೊಳಿಸಿದ ಪವಿತ್ರ ಭೂಮಿ. ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಭಗವತ್ಪಾದರು ತಮ್ಮ ಜೀವನ ಪರ್ಯಂತರ ಆಷಾಢ ಮಾಸ ಮಹಾಪೂಜೆ ನೆರವೇರಿಸಿ ಭಕ್ತ ಸಮುದಾಯಕ್ಕೆ ಆಶೀರ್ವದಿಸಿದ ನೆನಹು ಸದಾ ಹಸಿರಾಗಿದೆ. ಅವರ ನಾಮಾಂಕಿತದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸಮುದಾಯ ಭವನ ನಿರ್ಮಾಣಗೊಂಡಿದ್ದು ತಮಗೆ ಅಪಾರ ಸಂತೋಷ ತಂದಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಅಥಣಿ ವೀರಣ್ಣ, ದೇವರಮನೆ ಶಿವಕುಮಾರ ಮೊದಲ್ಗೊಂಡು ಟ್ರಸ್ಟ್‌ನ ಸದಸ್ಯರು ಸಹಕಾರ ಕೊಟ್ಟಿದ್ದನ್ನು ಸ್ಮರಿಸಿದರು.

ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಸತ್ಯ ಸಂಕಲ್ಪಾನುಸಾರ ಭವಿಷ್ಯತ್ತಿನ ದಿನಗಳಲ್ಲಿ ಅನೇಕ ಜನ ಹಿತಾತ್ಮಕ ಮತ್ತು ಬೋಧಾತ್ಮಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಇನ್ನು ಮುಂದೆ ಸಾರ್ವತ್ರಿಕ ಜನಸೇವೆಗೆ ಲಭ್ಯವಿದೆ. ಇದರ ಸದುಪಯೋಗಪಡಿಸಿಕೊಳ್ಳಲು ಅವಕಾಶವಿದೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ಅಥಣಿ ವೀರಣ್ಣ, ಎಸ್.ಎಸ್.ಬಕ್ಕೇಶ್, ಅಣಬೇರು ರಾಜಣ್ಣ, ಮಾಗನೂರು ಸಂಗಮೇಶ್ವರಗೌಡರು, ಬಿ.ಸಿ.ಉಮಾಪತಿ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.


ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು, ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಶ್ರಮಿಸಿದ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಶಾಲು ಫಲ ಪುಷ್ಪವಿತ್ತು ಶುಭ ಹಾರೈಸಿದರು.

ಟ್ರಸ್ಟ್‌ನ ಕಾರ್ಯದರ್ಶಿ ದೇವರಮನೆ ಶಿವಕುಮಾರ ಸರ್ವರನ್ನು ಸ್ವಾಗತಿಸಿದರು.
ಮೆಚ್ಚುಗೆ: ಅ.ಭಾ.ವೀರಶೈವ ಮಹಾಸಭಾದ ಉಪಾಧ್ಯಕ್ಷರು ಮತ್ತು ಹೆಸರಾಂತ ಲೆಕ್ಕ ಪರಿಶೋಧಕ ಅಥಣಿ ವೀರಣ್ಣನವರಿಗೆ ಹಾಗೂ ಹರಪನಹಳ್ಳಿ ಟಿ.ಎಂ.ಎ.ಇ.ಎಸ್. ಕಾರ್ಯದರ್ಶಿ ಚಂದ್ರಶೇಖರಯ್ಯನವರಿಗೆ ದಾವಣಗೆರೆ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ ದೊರೆತಿರುವುದು ಅವರ ಸೇವೆಗೆ ಸಂದ ಗೌರವವಾಗಿದೆ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಹರುಷ ವ್ಯಕ್ತಪಡಿಸಿದರು.


ವಾಸ್ತು ಶಾಂತಿ ಪೂಜಾ ವಿಧಿ ವಿಧಾನಗಳನ್ನು ತೆಲಗುಂದ ಹಿರೇಮಠ ಗುರುಶಾಸ್ತ್ರಿ ಬಳಗದವರಿಂದ ನೆರವೇರಿಸಿದರು. ಆಗಮಿಸಿದ ಸಕಲ ಸದ್ಭಕ್ತರಿಗೆ ಅನ್ನ ದಾಸೋಹ ಜರುಗಿತು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

12 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

15 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

16 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

21 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

22 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago