Categories: N.R pura

ಹಾಡಹಗಲೇ ಬೈಕ್ ಸವಾರರಿಬ್ಬರನ್ನು ಕೋವಿಯಿಂದ ಗುಂಡಿಕ್ಕಿ ಹತ್ಯೆ ! ಎಲ್ಲಿದು ?

ಎನ್.ಆರ್ ಪುರ: ಹಾಡಹಗಲೇ ಬೈಕ್ ಸವಾರರಿಬ್ಬರನ್ನು ಕೋವಿಯಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಚಂದ್ರುಳ್ಳಿಬಿದರೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.


ಬಾಳೆಹೊನ್ನೂರು ಗ್ರಾಮದ ಹಳ್ಳಿಬೈಲು ನಿವಾಸಿಗಳಾದ ಪ್ರಕಾಶ್(28) ಮತ್ತು ಪ್ರವೀಣ್(30) ಹತ್ಯೆಯಾದವರು.

ಕೊಲೆ ಆರೋಪಿಯನ್ನು ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲಸದ ನಿಮಿತ್ತ ಪ್ರವೀಣ್ ಜೊತೆ ಒಂದೇ ಬೈಕ್‍ನಲ್ಲಿ ನಾನು ಹಾಗೂ ನನ್ನ ಸಹೋದರ ಪ್ರಕಾಶ್ ಬಾಳೆಹೊನ್ನೂರಿಗೆ ಹೊರಟಿದ್ದೆವು. ಗ್ರಾಮದ ತಿರುವಿನಲ್ಲಿ ಹೋಗುತ್ತಿದ್ದ ವೇಳೆ ರಮೇಶ್ ಹಾರಿಸಿ ಗುಂಡು ಪ್ರವೀಣ್ ಹಾಗೂ ನನ್ನ ಸಹೋದರ ಪ್ರಕಾಶ್‍ಗೆ ತಗುಲಿ ಇಬ್ಬರು ಮೃತಪಟ್ಟಿದ್ದಾರೆ. ಬಂದೂಕು ನನಗೆ ತಗುಲದ ಪರಿಣಾಮ ಬದುಕುಳಿದಿದ್ದೇನೆ.
– ಪ್ರಶಾಂತ್, ಮೃತ ಪ್ರಕಾಶ್ ಸಹೋದರ

‘ಕ್ಷುಲ್ಲಕ ವಿಚಾರಕ್ಕೆ ಅಂಗನವಾಡಿ ಆಯಾ ಮಮತಾ ಎಂಬವರೊಂದಿಗೆ ಜಗಳವಾಡುತ್ತಿದ್ದ ರಮೇಶ್ ಕುಪಿತನಾಡಿ ಬಂದೂಕಿನಿಂದ ಆಕೆಯತ್ತ ಗುಂಡು ಹಾರಿಸಿದ್ದಾನೆ. ಆದರೆ ಗುಂಡು ಆಕೆಗೆ ತಗುಲದೇ ಪಕ್ಕದಲ್ಲೇ ಇದ್ದ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದವರಿಗೆ ತಗುಲಿದೆ. ಗುಂಡು ತಗುಲಿ ಬೈಕ್‍ನಲ್ಲಿದ್ದ ಪ್ರವೀಣ್, ಪ್ರಕಾಶ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಮೇಶ್ ಮಾನಸಿಕ ಅಸ್ವಸ್ಥನಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿಯಲಿದೆ’.
ಉಮಾಪ್ರಶಾಂತ್, ಎಸ್ಪಿ

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

13 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

15 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

16 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

21 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

22 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago