ಶೃಂಗೇರಿ : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ಸುಂಕದಮಕ್ಕಿ ತೂಗು ಸೇತುವೆ ಬಳಿ ನಡೆದಿದೆ.
ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದಮಕ್ಕಿಯ ಪ್ರಜ್ವಲ್ (20)ಮೃತ ದುರ್ದೈವಿಗಳು. ಇಬ್ಬರು 14 ವಿದ್ಯಾರ್ಥಿಗಳೊಂದಿಗೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ರಕ್ಷಿತ್ ನೀರಿನಲ್ಲಿ ಸಿಲುಕಿಕೊಂಡಿದ್ದ. ಆತನ ರಕ್ಷಣೆಗೆಂದು ಪ್ರಜ್ವಲ್ ತೆರಳಿದಾಗ ದುರ್ಘಟನೆ ಸಂಭವಿಸಿದೆ.
ಇಬ್ಬರು ಶೃಂಗೇರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರ ಸಾವಿನ ಸುದ್ದಿ ತಿಳಿದ ಕೂಡಲೇ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.