ಚುನಾವಣಾ ಕರ್ತವ್ಯ ಲೋಪ ; ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮಾನತು

0 41

ಶೃಂಗೇರಿ : ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೇಗೌಡ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡುವುದಲ್ಲದೆ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಕೆ.ಎನ್. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.


ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಮತ್ತು ತೀರಾ ಆಶ್ಲೀಲ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ಮನಬಂದಂತೆ ಮಾತನಾಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಕಲಂ 28 (ಎ) ಮತ್ತು 136 ಅಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

Leave A Reply

Your email address will not be published.

error: Content is protected !!