Accident | ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು !

ಶೃಂಗೇರಿ : ಇಲ್ಲಿನ ಹೊರವಲಯದ ಮೆಣಸೆ ಗ್ರಾಮದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಕೊಪ್ಪ ತಾಲೂಕಿನ ಎತ್ತಿನಹಟ್ಟಿ ಗ್ರಾಮದ ನಿವಾಸಿ ವೆಂಕಟೇಶ್ ಮೃತ ದುರ್ದೈವಿ ಆಗಿದ್ದಾರೆ. ಮೆಣಸೆಯ ರಾಜೀವ್ ಗಾಂಧಿ ಕಾಲೇಜು ಬಳಿ ಈ ಘಟನೆ ನಡೆದಿದೆ.

ಎತ್ತಿನಹಟ್ಟಿ ಗ್ರಾಮದಿಂದ ಶೃಂಗೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿ ವೆಂಕಟೇಶ್‌ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,790FollowersFollow
0SubscribersSubscribe
- Advertisement -spot_img

Latest Articles

error: Content is protected !!