Bear Attack | ಕರಡಿ ದಾಳಿ ; ರೈತನ ಸ್ಥಿತಿ ಗಂಭೀರ
ಶೃಂಗೇರಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಇಂದು ಮಾಧ್ಯಾಹ್ನದ ಸುಮಾರಿಗೆ ನಡೆದಿದೆ.
ತಾಲೂಕಿನ ಬೇಗಾರು ಸಮೀಪದ ತಾರೊಳ್ಳಿಕೊಡಿಗೆ ಎಂಬಲ್ಲಿ ಈ ಘಟನೆ ನಡೆದಿದಿದ್ದು, ಶಿವಪ್ಪ ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತೀರುವ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಶಿವಪ್ಪ ಅವರ ಕಣ್ಣಿಗೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಕರೆದೊಯ್ಯಲಾಗಿದೆ. ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆಯೂ ತಾರೊಳ್ಳಿಕುಡಿಗೆಯಲ್ಲಿ ಕರಡಿ ದಾಳಿ ಆಗಿತ್ತು ಕಳೆದ ಒಂದು ವರ್ಷದ ಹಿಂದೆ ಇದೇ ತಾರೊಳ್ಳಿಕುಡಿಗೆಯಲ್ಲಿ ಕೆಲಸಕ್ಕೆಂದು ತೆರಳಿದ ಇಬ್ಬರ ಮೇಲೆ ಕರಡಿ ದಾಳಿ ಮಾಡಿತ್ತು. ಆ ಸಮಯದಲ್ಲೂ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಇಲ್ಲೇ ಮತ್ತೊಮ್ಮೆ ಕರಡಿ ದಾಳಿ ಆಗಿದೆ. ಈ ಪ್ರದೇಶದಲ್ಲಿ ಹೆಚ್ಚು ಕರಡಿಗಳಿವೆ. ದಿನನಿತ್ಯ ಕೃಷಿ ಚಟುವಟಿಕೆಗೆ ತೆರಳುವ ರೈತರು ಭಯದಿಂದ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.