SORABA ; ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನ ಮತ್ತು ಸುತ್ತಲಿನ ಪರಿಸರದಲ್ಲಿ ಅವಶ್ಯಕ ವಸ್ತುಗಳ ಕುರಿತು ಮಾಹಿತಿ ಅಗತ್ಯ ಎಂದು ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ. ಮಮತಾ ರಾಜೇಶ್ ಹೇಳಿದರು.
ಶನಿವಾರ ಪಟ್ಟಣದ ಕಾನುಕೇರಿ ಮಠದ ಸಮಾಧಾನ ಸಭಾಂಗಣದಲ್ಲಿ ಸ್ಮಾರ್ಟ್ ಕಿಟ್ ಪೀ ಎಜ್ಯುಕೇಶನ್ ಸ್ಕೂಲ್ ವತಿಯಿಂದ ಹಮ್ಮಿಕೊಂಡಿದ್ದ ಮಾದರಿ ಗ್ರಾಮ ಮತ್ತು ಸಮುದಾಯ ಸಹಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇವಲ ಪಠ್ಯ ಶಿಕ್ಷಣಕ್ಕೆ ಮಾತ್ರ ಪೂರಕವಾಗಿರದೇ, ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಬಾಲ್ಯದಲ್ಲಿ ಮಕ್ಕಳಿಗೆ ವ್ಯವಹಾರಿಕ ಜ್ಞಾನವನ್ನು ನೀಡಬೇಕಾದ ಅಗತ್ಯವಿದೆ. ಇದರಿಂದ ಮಕ್ಕಳ ಮನೋವಿಕಸನಕ್ಕೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುವ ಮತ್ತು ಅಲ್ಲಿನ ಪರಿಸರವನ್ನು ಪರಿಚಯಿಸುವ ಉದ್ದೇಶದಿಂದ ಮಾದರಿ ಗ್ರಾಮ ಮತ್ತು ಸಮುದಾಯಕ್ಕೆ ಅಗತ್ಯವಿರುವ ಸಹಾಯಕರು ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಮಾಜಿಕ ಚಿಂತನೆ ಮತ್ತು ಜವಾಬ್ದಾರಿಯನ್ನು ತಿಳಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇಂತಹ ಕಾರ್ಯಕ್ರಮ ನಡೆಯಲು ಪೋಷಕರ ಶ್ರಮವೂ ಸಹ ಸಾಕಷ್ಟಿದೆ. ಮಕ್ಕಳಿಗೆ ಅಗತ್ಯ ವಸ್ತುಗಳ ಕುರಿತು ಪರಿಚಯಿಸುವುದರಿಂದ ಅವರ ಜ್ಞಾನದ ಮಟ್ಟವು ಸಹ ಉನ್ನತಿಯಾಗುತ್ತದೆ ಎಂದರು.
ಪೋಷಕರಾದ ದೀಪಿಕಾ ನವುಲೆ ಮಾತನಾಡಿ, ನಮ್ಮ ಶಾಲೆ, ನಮ್ಮ ಹೆಮ್ಮೆ ಎನ್ನುವ ಘೋಷದೊಂದಿಗೆ ಕಾರ್ಯಕ್ರಮದ ನಡೆಸುತ್ತಿರುವುದು ಸ್ವಾಗತಾರ್ಹ. ಮಕ್ಕಳಿಗೆ ಸಮುದಾಯಕ್ಕೆ ಅಗತ್ಯವಿರುವ ಶಿಕ್ಷಕರು, ವೈದ್ಯರು, ಪೊಲೀಸರು, ವ್ಯಾಪಾರಿ, ರೈತರು, ಪೋಸ್ಟ್‌ಮ್ಯಾನ್, ಹೀಗೆ ಎಲ್ಲಾ ರೀತಿಯಲ್ಲೂ ಪ್ರತಿಯೊಬ್ಬರು ಅವಶ್ಯಕವಿದೆ. ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ ಎಂದರು.
ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಕೆ.ಪಿ. ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಾದ ದತ್ತಾ ಸೊರಬ, ಪುರುಷೋತ್ತಮ ಎನ್. ಗದ್ದೆಮನೆ ಚಂದ್ರಗುತ್ತಿ, ಶಿಕ್ಷಕಿಯರಾದ ಪೂರ್ಣಿಮಾ, ಚಂದನಾ, ತೇಜಸ್ವಿನಿ, ಪೋಷಕರಾದ ಪ್ರವೀಣಾ, ರವಿ, ದಿವ್ಯಾ, ಶಾಕಿಬ್, ಖಾಲಿದಾ ಸೇರಿದಂತೆ ಇತರರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.