ಹೊಸನಗರ

ಬುಲ್ಡೋಜರ್ ಗುಡ್ಡದ ಚಿರಂಜೀವಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಗರಿ

ಕೋಡೂರು ಗ್ರಾ.ಪಂ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆ ಬುಲ್ಡೋಜರ್ ಗುಡ್ಡದ ಶಿಕ್ಷಕ ಚಿರಂಜೀವಿ ಎಲ್. ಅವರಿಗೆ 2026-27ನೇ ಸಾಲಿನ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 'ಶಿವಮೊಗ್ಗ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ'

InShot 20260904 194202002

ಹೊಸನಗರ : ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ ಕೋಡೂರು ಗ್ರಾ.ಪಂ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆ ಬುಲ್ಡೋಜರ್ ಗುಡ್ಡದ ಶಿಕ್ಷಕ ಚಿರಂಜೀವಿ ಎಲ್. ಅವರಿಗೆ 2026-27ನೇ ಸಾಲಿನ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ‘ಶಿವಮೊಗ್ಗ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಒಲಿದುಬಂದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಚಿರಂಜೀವಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ನವೀನ ಹಾಗೂ ಆಕರ್ಷಕ ಬೋಧನಾ ವಿಧಾನಗಳ ಅಳವಡಿಕೆ ಮತ್ತು ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಇವರು ತೋರಿದ ಅಪಾರ ಶ್ರದ್ಧೆ ಮತ್ತು ಬದ್ಧತೆಯನ್ನು ಗುರುತಿಸಿ ಶಾಲಾ ಶಿಕ್ಷಣ ಇಲಾಖೆಯು ಇವರನ್ನು ಈ ಗೌರವಾನ್ವಿತ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭ:

ಸೆಪ್ಟೆಂಬರ್ 5ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಭಿನಂದನೆ :

ಶಿಕ್ಷಕ ಚಿರಂಜೀವಿ ಅವರ ಈ ಸಾಧನೆಗೆ ಶಾಲೆಯ ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಪೋಷಕರು, ಶಾಲಾಭಿವೃದ್ಧಿ ಸಮಿತಿ (SDMC) ಸದಸ್ಯರು ಹಾಗೂ ಬುಲ್ಡೋಜರ್ ಗುಡ್ಡದ  ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]