ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸೆ.19ಕ್ಕೆ ಸಿಎಂ ಸಂವಾದ ; ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

InShot 20260917 113045069

ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೇಟಿಯ ರೂಪು-ರೇಷೆಗಳನ್ನು ಹಂಚಿಕೊಂಡರು.

ರೈತರೊಂದಿಗೆ ಸಂವಾದ:

ಅಂದು ಬೆಳಿಗ್ಗೆ 10 ಗಂಟೆಗೆ ತೀರ್ಥಹಳ್ಳಿಯ ಪದವಿ ಕಾಲೇಜಿನಲ್ಲಿ ಸ್ಥಳೀಯ ಕೃಷಿಕರೊಂದಿಗೆ ಮುಖಾಮುಖಿ ಚರ್ಚೆ ನಡೆಯಲಿದೆ.

ಬಹಿರಂಗ ಸಭೆ:

ಅನಂತಮೂರ್ತಿ ಪ್ರೌಢಶಾಲೆ ಆವರಣದಲ್ಲಿ ಬಹಿರಂಗ ಸಮಾವೇಶ ಆಯೋಜನೆಗೊಂಡಿದ್ದು, ಸುಮಾರು 25,000 ಜನರು ಭಾಗವಹಿಸುವ ನಿರೀಕ್ಷೆಯಿದೆ.

ಮುಂದಿನ ಹೆಜ್ಜೆ:

ಕೃಷಿಕರು, ಕಾರ್ಮಿಕರು ಹಾಗೂ ಸ್ಥಳೀಯರ ಅಹವಾಲು ಸ್ವೀಕರಿಸಿದ ಬಳಿಕ ಅವರು ಬಾಳೆಹೊನ್ನೂರಿಗೆ ನಿರ್ಗಮಿಸಲಿದ್ದಾರೆ.

ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯಲಿರುವ ವಿಧಾನಮಂಡಲದ ವಿಶೇಷ ಅಧಿವೇಶನಕ್ಕೂ ಮುನ್ನ, ಕಸ್ತೂರಿ ರಂಗನ್ ವರದಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಸಾರ್ವಜನಿಕರ ಅಭಿಪ್ರಾಯ ಪಡೆಯುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಕಿಮ್ಮನೆ ಸ್ಪಷ್ಟಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪ್ರಚಾರದ ರಾಜಕಾರಣ ಬೇಡ: ಕಿಮ್ಮನೆ ರತ್ನಾಕರ್ ಆಕ್ರೋಶ

ರಾಷ್ಟ್ರೀಯ ಭಾವನೆ ಹಾಗೂ ಸಂಕೇತಗಳು ಜನರನ್ನು ಒಂದಾಗಿಸಬೇಕೇ ಹೊರತು ವಿಭಜಿಸಬಾರದು ಎಂದು ಪ್ರಜಾಪ್ರಭುತ್ವ ದಿನಾಚರಣೆ ವೇಳೆ ನಡೆದ ಘಟನೆಗೆ ಕಿಮ್ಮನೆ ರತ್ನಾಕರ್ ಪ್ರತಿಕ್ರಿಯಿಸಿದರು.

‘ವಂದೇ ಮಾತರಂ’ ಹಾಡಿನ ವಿಚಾರದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕಾರ್ಯಕ್ರಮ ಬಹಿಷ್ಕರಿಸಿದ್ದನ್ನು ಉಲ್ಲೇಖಿಸಿ, “ಸರ್ಕಾರದ ಅಧಿಸೂಚನೆಯನ್ನು ನಾನು ಬೆಂಬಲಿಸುತ್ತೇನೆ. ಆದರೆ ಬರಿ ಹಾಡಿನಿಂದ ಜನರ ಹಸಿವು ಇಂಗುವುದಿಲ್ಲ. ಪ್ರಚಾರದ ಗೀಳಿಗಾಗಿ ಇಂತಹ ಸೂಕ್ಷ್ಮ ವಿಚಾರಗಳನ್ನು ಬಳಸಿ ಸಮಾಜ ಒಡೆಯುವ ಬದಲು, ಸಾರ್ವಜನಿಕರ ಬದುಕಿನ ನಿಜವಾದ ಸಮಸ್ಯೆಗಳ ಬಗ್ಗೆ ಹೋರಾಡುವುದು ಒಳಿತು” ಎಂದರು.

ಈ ಪತ್ರಿಕಾಗೋಷ್ಠಿಯಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪ್ರಮುಖರಾದ ಆರ್. ಪ್ರಸನ್ನ ಕುಮಾರ್, ಮುಡುಬ ರಾಘವೇಂದ್ರ, ಆದರ್ಶ ಹುಂಚದಕಟ್ಟೆ, ಸಚೀಂದ್ರ ಹೆಗಡೆ, ಕೆಸ್ತೂರು ಮಂಜುನಾಥ ಹಾಗೂ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]