ರಿಪ್ಪನ್ಪೇಟೆ ; ಗರ್ತಿಕೆರೆಯ ಗುರುಕರುಣೆ ಆಟೋ ಚಾಲಕ ಚಂದ್ರಶೇಖರ ಎಂಬುವರ ಮನೆಯಲ್ಲಿ ಅಡಗಿದ್ದ ಸುಮಾರು ಆರು ಅಡಿ ಉದ್ದದ ನಾಗರಹಾವನ್ನು ರಿಪ್ಪನ್ಪೇಟೆಯ ಉರಗ ಸಂರಕ್ಷಕ ಗಂಗಾಧರ್ ಎಂಬುವರು ಸುರಕ್ಷಿತವಾಗಿ ಸೆರೆ ಹಿಡಿದು ಕಾಡಿಗೆ ಬಿಟ್ಟರು.
ರಾತ್ರಿ ವೇಳೆಯಲ್ಲಿ ಮನೆಯೊಳಗೆ ಶಬ್ದ ಮಾಡುವುದನ್ನು ಗಮನಿಸಿದ ಮನೆಯವರು ಹಾವು ಇರುವುದನ್ನು ಪತ್ತೆ ಹಚ್ಚಿದ್ದಾರೆ. ಕೂಡಲೇ ಗಂಗಾಧರನಿಗೆ ವಿಷಯ ತಿಳಿಸಿದ್ದು ಸ್ಥಳಕ್ಕಾಗಮಿಸಿದ ಗಂಗಾಧರ್ ಸುರಕ್ಷಿತವಾಗಿ ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಈ ಮೂಲಕ ಮನೆಯವರು ನಿಟ್ಟುಸಿರು ಬಿಡುವಂತಾಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





