ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ.
ಪ್ರಥಮ ಪಿಯು ಕಾಮರ್ಸ್ ವಿದ್ಯಾರ್ಥಿ ಯಶವಂತ್ (17) ಮೃತ ವಿದ್ಯಾರ್ಥಿ. ಈತ ನಗರ ಸಾರಿಗೆ ಬಸ್‌ನಲ್ಲಿ ಪುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ. ಸಿಟಿ ಬಸ್ ಮೈಲಾರೇಶ್ವರ ದೇವಾಲಯದ ಬಳಿ ಬರುವಾಗ ಚಾಲಕ ಬ್ರೇಕ್ ಹಾಕಿದ್ದಾನೆ. ಇದಕ್ಕಿದ್ದಂತೆ ಬ್ರೇಕ್ ಬಿದ್ದ ಹಿನ್ನೆಲೆಯಲ್ಲಿ ಪುಟ್ ಬೋರ್ಡ್‌ನ ಮೇಲಿದ್ದ ವಿದ್ಯಾರ್ಥಿ ಆಯತಪ್ಪಿ ಬಸ್‌ನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.