ಸಾಗರ

ನಡುರಸ್ತೆಯಲ್ಲಿ ನಜ್ಜುಗುಜ್ಜಾದ ಕಾರು: ಪುಟ್ಟ ಕಂದಮ್ಮ ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪುಟ್ಟ ಮಗುವೊಂದು ಗಾಯಗೊಂಡಿರುವ ಘಟನೆ ನಡೆದಿದೆ.

Sagara Bus Car Accident

ಸಾಗರ: ತಾಲೂಕಿನ ಆನಂದಪುರ ವ್ಯಾಪ್ತಿಯ ದಾಸಕೊಪ್ಪದ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪುಟ್ಟ ಮಗುವೊಂದು ಗಾಯಗೊಂಡಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಾಗರ ಕಡೆಯಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಎದುರು ದಿಕ್ಕಿನಿಂದ (ಆನಂದಪುರದಿಂದ ಸಾಗರಕ್ಕೆ) ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ.

ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]