Accident

ಜೀಪ್ ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ, ಪ್ರಯಾಣಿಕರಿಗೆ ಗಾಯ !

HOSANAGARA ; ಜೀಪ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಕ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.

ಜೀಪ್‌ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]