ಶಿವಮೊಗ್ಗ : ಸೆಪ್ಟೆಂಬರ್ 4ರಂದು ಶಿವಮೊಗ್ಗ ನಗರ ಪಾಲಿಕೆ ಸರಹದ್ದಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಯ ಪ್ರಕಾರ ಈ ದಿನವನ್ನು ‘ಮಾಂಸರಹಿತ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ನಗರದಾದ್ಯಂತ ಕಸಾಯಿಖಾನೆಗಳು ಮತ್ತು ಮಾಂಸದ ಮಳಿಗೆಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ವ್ಯಾಪಾರಿಗಳಿಗೆ ಎಚ್ಚರಿಕೆ:
ಪಾಲಿಕೆ ವ್ಯಾಪ್ತಿಯ ಎಲ್ಲ ಮಾಂಸದ ವ್ಯಾಪಾರಿಗಳು ಅಂದು ವಹಿವಾಟು ನಡೆಸದೆ ಅಂಗಡಿಗಳನ್ನು ಮುಚ್ಚಿ ನಿಯಮ ಪಾಲಿಸಬೇಕು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಕಾನೂನು ಕ್ರಮ:
ಪಾಲಿಕೆಯ ಈ ನಿರ್ದೇಶನವನ್ನು ಉಲ್ಲಂಘಿಸಿ ಮಾಂಸ ಮಾರಾಟ ಅಥವಾ ಪ್ರಾಣಿವಧೆ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್ಚರಿಸಿದ್ದಾರೆ.

