ಸಾಗರ

ರಾ.ಸೇ.ಯೋಜನೆಯ ಮೂಲಕ ಗ್ರಾಮಗಳ ಉದ್ಧಾರದ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ ; ಪ್ರೊ.ಕೆ.ಸಿ.ವೀರಣ್ಣ

ಸಾಗರ ; ಮಹಾತ್ಮ ಗಾಂಧಿಯವರ ಕನಸಿನ ಕೂಸಾದ ರಾಷ್ಟ್ರೀಯ ಸೇವಾ ಯೋಜನೆಯು ಯುವಜನರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮಗಳ ಉದ್ಧಾರಕ್ಕೆ ಪೂರಕವಾಗಿದೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ಅಭಿಪ್ರಾಯಪಟ್ಟರು.

WhatsApp Group Join Now
Telegram Group Join Now
Instagram Group Join Now

ತುಪ್ಪೂರು ಪಂಚಾಯತಿ ವ್ಯಾಪ್ತಿಯ ಕೊರಗಿ ಗ್ರಾಮದಲ್ಲಿ ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯವು ಆಯೋಜಿಸಿದ್ದ ವಿಶೇಷ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಗ್ರಾಮೀಣ ಪರಿಸರದಲ್ಲಿದ್ದು ಅಲ್ಲಿನ ಜನಜೀವನವನ್ನು ಅರಿತು ಸಕಾರಾತ್ಮಕ ಧೋರಣೆ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ತುಪ್ಪೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ರಾಷ್ಟ್ರೀಯ ಸೇವಾ ಯೋಜನೆಯಿಂದಾಗಿ ತಮ್ಮಲ್ಲಿ ನಾಯಕತ್ವದ ಗುಣ ತುಂಬಿ, ಸೇವಾ ಮನೋಭಾವ ಬೆಳೆಯಿತೆಂದು ನುಡಿದರು.

ಮಹಾವಿದ್ಯಾಲಯದ ಡೀನ್ ಪ್ರೊ.ಪ್ರಕಾಶ್ ನಡೂರ್ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿಶ್ಲೇಷಿಸಿ ಒಂದು ವಾರ ಕಾಲದ ಈ ಶಿಬಿರದಲ್ಲಿ, ಸಾರ್ವಜನಿಕ ಆರೋಗ್ಯ, ಕೃಷಿ-ಪಶುಸಂಗೋಪನೆಗೆ ಸಂಬಂಧಿಸಿದ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಗ್ರಾಮಸ್ಥರೆಲ್ಲರೂ ಹೆಚ್ಚು ಆಸಕ್ತಿಯಿಂದ ಶಿಬಿರದ ಎಲ್ಲಾ ಕಾರ್ಯಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯತಿ ಸದಸ್ಯೆ ಗೀತಾ ಈಶ್ವರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಮಹಿಳಾ ಸಂಘಗಳ ಒಕ್ಕೂಟದ ಅಧ್ಯಕ್ಷೆ ಮಾನಸಾ ರಮೇಶ್, ಶಿಕ್ಷಕ ಹರೀಶ್ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೇ 17 ರಿಂದ 23 ರವರೆಗೆ ನಡೆಯಲಿರುವ ಶಿಬಿರದಲ್ಲಿ ಆಯುರ್ವೇದ ಚಿಕಿತ್ಸಾ ಶಿಬಿರ, ದಂತ ಚಿಕಿತ್ಸಾ ಶಿಬಿರ, ರಕ್ತದಾನ ಶಿಬಿರ, ಬರಡು ರಾಸು ಚಿಕಿತ್ಸಾಶಿಬಿರ, ಕೃಷಿ ಹಾಗೂ ಪಶುಸಂಗೋಪನೆಯ ವಿವಿಧ ಪ್ರಾತ್ಯಕ್ಷತೆಗಳನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರಾಧಿಕಾರಿಗಳಾದ ಡಾ.ರವಿಕುಮಾರ್, ಡಾ.ಯೋಗೇಶ್, ಡಾ.ಪ್ರಶಾಂತ್, ಡಾ.ಚೇತನ್ ಶರ್ಮ ಮತ್ತು ಡಾ.ನಾಗರಾಜ್ ಸಂಯೋಜಿಸಿರುವ ಶಿಬಿರದಲ್ಲಿ ಮಹಾವಿದ್ಯಾಲಯದ 76 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]