ಹೊಸನಗರ

ಯಾವ ಸೋಲುಗಳಿಗೂ ನಾವು ಧೃತಿಗೆಟ್ಟಿಲ್ಲ, ಕಾಂಗ್ರೆಸ್‌ಗೆ ಇಂದು ದುರ್ಗತಿ ಬಂದಿದೆ: ಮಾಜಿ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ನಾವು ರಾಜಕೀಯದಲ್ಲಿ ಎದುರಾದ ಯಾವ ಸೋಲುಗಳಿಗೂ ಧೃತಿಗೆಡದೆ ಪಕ್ಷವನ್ನು ಕಟ್ಟಿದ್ದೇವೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣವಾಗಿದೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Araga Jnanendra

ಹೊಸನಗರ: “ನಾವು ರಾಜಕೀಯದಲ್ಲಿ ಎದುರಾದ ಯಾವ ಸೋಲುಗಳಿಗೂ ಧೃತಿಗೆಡದೆ ಪಕ್ಷವನ್ನು ಕಟ್ಟಿದ್ದೇವೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣವಾಗಿದೆ,” ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಹೊಸನಗರ ಪಟ್ಟಣದಲ್ಲಿ ನಡೆದ ಸೇವಾ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಕೊಂಡಾಡುವ ಜೊತೆಗೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಲಿಷ್ಠ ರಾಷ್ಟ್ರ ನಿರ್ಮಾಣ:

“ಆರಂಭದ ದಿನಗಳಲ್ಲಿ ನಮ್ಮ ಮನೆಯವರೇ ಈ ಪಕ್ಷಕ್ಕೆ ಯಾಕೆ ಸೇರುತ್ತೀಯಾ ಎಂದು ಪ್ರಶ್ನಿಸುತ್ತಿದ್ದರು. ಆದರೆ ಅಂದು ಕಟ್ಟಿದ ಬಿಜೆಪಿ ಇಂದು ಹಿಂದುಳಿದ ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ತಾಕತ್ತಿನಿಂದಾಗಿ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಲಾಯಿತು. ಪೆಹಲ್ಗಾಮ್‌ನಲ್ಲಿ ಉಗ್ರರು ಜಾತಿ ಕೇಳಿ 26 ಜನರನ್ನು ಕೊಂದಿದ್ದರು. ಇದಕ್ಕೆ ಪ್ರತಿಯಾಗಿ ನಮ್ಮ ಹೆಮ್ಮೆಯ ಯೋಧರು ಗಡಿ ದಾಟಿ ಹೋಗಿ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಮೋದಿ ಅವರ ಅಧಿಕಾರಾವಧಿ ದೇಶದ ದಿಕ್ಕನ್ನೇ ಬದಲಾಯಿಸಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿವೃದ್ಧಿ ಮತ್ತು ರೈಲು ಯೋಜನೆ:

ರೈಲ್ವೆ ಅಭಿವೃದ್ಧಿ ಕುರಿತು ಮಾತನಾಡಿದ ಅವರು, “ಈ ಹಿಂದೆ ಅನೇಕರು ರೈಲು ತರುತ್ತೇವೆ ಎಂದು ಹೇಳಿ ಜನರಿಗೆ ಬರೀ ‘ರೈಲು’ ಬಿಟ್ಟಿದ್ದರು (ಸುಳ್ಳು ಭರವಸೆ ನೀಡಿದ್ದರು). ಆದರೆ ಮೋದಿ ಸರ್ಕಾರದ ಅವಧಿಯಲ್ಲಿ ನಿಜವಾಗಿಯೂ ರೈಲುಗಳ ಯೋಗ ಹೆಚ್ಚಾಗಿದೆ,” ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ವಿರುದ್ಧ ಟೀಕೆ:

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಆರಗ ಜ್ಞಾನೇಂದ್ರ, “125 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಇಂದು ದುರ್ಗತಿ ಬಂದಿದೆ. ದೆಹಲಿಯಲ್ಲಿ ಜಿರಳೆಗಳಂತೆ ಸೇರಿಕೊಂಡು ಹೋರಾಟ ಮಾಡುತ್ತಾ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದ್ದಾರೆ. ಚುನಾವಣೆಯಲ್ಲಿ ಸೋತವರೇ ಅಲ್ಲಿ ಸೇರಿದ್ದಾರೆ ಹೊರತು, ಮತ ಹಾಕಿದ ಜನಸಾಮಾನ್ಯರು ಯಾರೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ,” ಎಂದರು.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸಿದ ಅವರು, “ಬರಗಾಲ ನಿರ್ವಹಣೆ ಅಂದರೆ ಕಡ್ಲೆ-ಮಂಡಕ್ಕಿ ಕೊಡುವುದಲ್ಲ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿ ಕೆಲಸ ಮಾಡಲು ಬಿಡಿಗಾಸೂ ಇಲ್ಲದಂತಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಸ್ವಾಮಿರಾವ್, ಕೆ.ಜಿ. ಕುಮಾರಸ್ವಾಮಿ, ಭಾರತಿ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!