ಶಿವಮೊಗ್ಗ

ರಾಹುಲ್ ಗಾಂಧಿ ವಿರುದ್ಧ FIR: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

InShot 20260901 225024820

ಶಿವಮೊಗ್ಗ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ನಗರದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿ ಎಫ್‌ಐಆರ್ ದಾಖಲಿಸಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಲ್ದ್ವಾನಿಯಲ್ಲಿ ನಡೆಸಿದ್ದ ಸಮಾವೇಶ ನಡೆದ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ‘ಶುದ್ಧೀಕರಣ ಹವನ’ ನಡೆಸಿದ ಘಟನೆಗೆ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಹಲ್ದ್ವಾನಿ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ದಲಿತ ಸಮುದಾಯದ ವಿರುದ್ಧ ನಡೆಯುವ ತಾರತಮ್ಯವನ್ನು ಪ್ರಶ್ನಿಸುವವರನ್ನೇ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು.

ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ಹವನ ಜಾತಿ ತಾರತಮ್ಯದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಇಂತಹ ಘಟನೆಗೆ ವಿರೋಧ ವ್ಯಕ್ತಪಡಿಸಿದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಖಂಡನೀಯ. ರಾಜ್ಯ ಯಂತ್ರವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ನಡೆದ ಶುದ್ಧೀಕರಣ ಕಾರ್ಯಕ್ರಮದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರೂ ಸ್ಪಂದನೆ ದೊರೆತಿಲ್ಲ. ಆದರೆ, ಇದೇ ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತಾರತಮ್ಯದ ನಡೆಯಾಗಿದೆ ಎಂದು ಪ್ರಸನ್ನ ಕುಮಾರ್ ಹೇಳಿದರು.

ಪ್ರತಿಭಟನೆಯಲ್ಲಿ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಎಸ್.ಟಿ. ಚಂದ್ರಶೇಖರ್, ಆರ್. ರಾಜಶೇಖರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಪುಷ್ಪ ಶಿವಕುಮಾರ್, ಎಸ್‌ಸಿ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ವಕ್ತಾರ ಜಿ.ಡಿ. ಮಂಜುನಾಥ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>