Hosanagara

ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ಮುಖ್ಯ ; ಮೇಲಿನಬೆಸಿಗೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ರೆಡ್ಡಿ

ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಖಾಸಗಿ ಶಾಲೆಗಿಂತ ಉತ್ತಮವಾಗಿದ್ದು ಎಲ್ಲಾ ವಿಭಾಗಗಳಲ್ಲಿ ಪೈಪೋಟಿ ನೀಡುತ್ತಿದೆ. ಇದಕ್ಕೆ ಶಾಲೆಯ ನುರಿತ ಶಿಕ್ಷಕ ವರ್ಗ ಹಾಗೂ ಪೋಷಕರ ನಿರಂತರ ಬೆಂಬಲ ಕಾರಣ ಎಂದು ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಅಭಿಪ್ರಾಯಪಟ್ಟರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೇಲಿನಬೆಸಿಗೆ ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶಾಲೆ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವ ‘ನೃತ್ಯ ಸೌರಭ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಣದ ಜೊತೆಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕರಾಟೆ ಸೇರಿದಂತೆ ಅನೇಕ ಪಠ್ಯೇತರ ಚಟುವಟಿಕೆಯಲ್ಲೂ ಸಾಧನೆ ಮೆರೆದಿರುವುದು ಶ್ಲಾಘನೀಯ ಸಂಗತಿ. ಪೋಷಕರ ಜೊತೆ ದಾನಿಗಳು ಕೈ ಜೋಡಿಸಿದಲ್ಲಿ ಮಕ್ಕಳು ಮತ್ತಷ್ಟು ಸಾಧಿಸಲು ಸಾಧ್ಯವೆಂದು ಅವರು ಶಾಲೆಯ ಸಮಗ್ರ ಅಭಿವೃದ್ದಿಗೆ ಸಹಕಾರ ನೀಡಲು ಸಿದ್ದವಿರುವುದಾಗಿ ತಿಳಿಸಿದರು.

ಜ.31ಕ್ಕೆ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ಅವರನ್ನು ಇದೇ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿದರು.
ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪೂರ್ಣಿಮಾ ಸೋಮಶೇಖರ್ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಜ್ಯೋತಿ, ಚಂದ್ರಕಲಾ, ಸಾಲಗೇರಿ ಲಕ್ಷö್ಮಣಗೌಡ, ಲಕ್ಷ್ಮಿದೇವಿ, ನಾಗರಾಜ್, ಶಾಂತಾ ಪಾಂಡು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹೆಚ್.ಆರ್. ಸುರೇಶ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿ. ರಂಗಸ್ವಾಮಿ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್. ನಾಗಭೂಷಣ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅವಿನಾಶ್, ಎಲ್‌ಕೆಜಿ ಶಾಲೆ ಅಧ್ಯಕ್ಷ ಸುಧೀರ್ ಶೆಟ್ಟಿ, ಪ್ರಭಾರಿ ಮುಖ್ಯ ಶಿಕ್ಷಕ ಜಿ.ಎ. ಗುರುಮೂರ್ತಿ, ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಗೋಪಿನಾಥ್, ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಎರಗಿ ಉಮೇಶ್, ಶಿಕ್ಷಕ ಧರ್ಮಪ್ಪ, ಶಿಕ್ಷಕಿ ಸುಮಾಲಿನಿ, ಸಲ್ಮ, ಶಿಲ್ಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಗುರುಮೂರ್ತಿ ಸ್ವಾಗತಿಸಿ, ಶಿಕ್ಷಕಿ ಸುಲೋಚನ ವರದಿ ವಾಚಿಸಿದರು. ಅರ್ಚನಾ ನಿರೂಪಿಸಿ, ಪೂರ್ಣಿಮ ವಂದಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>