ಅಪರಾಧ ಸುದ್ದಿ

ಅಂಗವಿಕಲರ ಪಿಂಚಣಿಗೆ ಲಂಚ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ !

ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

InShot 20260901 201315302

ಶಿವಮೊಗ್ಗ : ಹುಟ್ಟು ಮೂಕ ವ್ಯಕ್ತಿಯೊಬ್ಬರಿಗೆ ಅಂಗವಿಕಲರ ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

WhatsApp Group Join Now
Telegram Group Join Now
Instagram Group Join Now

ಪ್ರಕರಣದ ವಿವರ:

📢 Stay Updated! Join our WhatsApp Channel Now →

ಘಟನೆ: ಭದ್ರಾವತಿಯ ಡಿ.ಬಿ. ಹಳ್ಳಿಯ ಗಿರೀಶ್ ಎಂಬುವರು ತಮ್ಮ ಮೂಕ ತಂದೆಗೆ ಪಿಂಚಣಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕೆ ಉಪ ತಹಶೀಲ್ದಾರ್ ಪುಷ್ಪಲತಾ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಟ್ರಾಪ್: 2017ರ ಸೆಪ್ಟೆಂಬರ್ 21ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ₹5,000 ಮುಂಗಡ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತನಿಖೆ & ವಾದ: ಪೊಲೀಸ್ ಇನ್‌ಸ್ಪೆಕ್ಟರ್ ಹೆಚ್.ಎಸ್. ತಿಪ್ಪೇಸ್ವಾಮಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್‌ ರಾಜ್ ವಾದ ಮಂಡಿಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆಯ ತೀರ್ಪು ಪ್ರಕಟಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>