ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ ಮೇಯಲು ಹೋದ ಸಂದರ್ಭದಲ್ಲಿ ಬೃಹತ್ ಗಾತ್ರದ ಒಣಗಿದ ಮರವೊಂದು ಏಕಾಏಕಿ ಹಸುವಿನ ಮೇಲೆ ಬಿದ್ದ ಪರಿಣಾಮ ಹಸು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸುಮಾರು 40 ಸಾವಿರ ರೂ. ಮೌಲ್ಯದ ದನ ಇದಾಗಿದ್ದು, ದಿಢೀರ್ ಸಂಭವಿಸಿದ ಘಟನೆಯಿಂದ ಹಸು ಒಡತಿಯ ಇಡೀ ಕುಟುಂಬ ಆತಂಕಕ್ಕೆ ಒಳಗಾಗಿದೆ.
ತಾಲ್ಲೂಕು ಆಡಳಿತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





