ವಿದ್ಯಾರ್ಥಿನಿ ಸಾವಿಗೆ ಕಾರಣನಾದ ಬಸ್ ಚಾಲಕ ಪೊಲೀಸರ ವಶಕ್ಕೆ
ತರೀಕೆರೆ: ದುಗ್ಲಾಪುರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಜಿತೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಎಸ್ಪಿ ವಿಕ್ರಮ್ ಅಮಟೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ.
ದುಗ್ಲಾಪುರದಲ್ಲಿ ಇಂದು ಬೆಳಗ್ಗೆ ಬಸ್ ಅಪಘಾತ ಸಂಭವಿಸಿತ್ತು. ಇದರ ಪರಿಣಾಮವಾಗಿ ಓರ್ವ ವಿಧ್ಯಾರ್ಥಿನಿ ಸಾವನ್ನಪ್ಪಿದ್ದಳು. ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.