Categories: Crime NewsSagara News

ಅರಣ್ಯ ಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ಸಾಗರ : ತಾಲೂಕಿನ ತ್ಯಾಗರ್ತಿ ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತದೇಹ ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ (55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ ಕಳೆದ 4 ದಿನಗಳಿಂದ ಕಾಣೆಯಾಗಿದ್ದು ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ ಬರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಸುದ್ಧಿ ತಿಳಿದು ತೀವ್ರ ದುಖಃತಪ್ತರಾಗಿದ್ದಾರೆ.

ಚೆನ್ನಾಪುರ ಗ್ರಾಮದ ವ್ಯಕ್ತಿಯೊಬ್ಬರು ಕಳೆದು ಹೋಗಿದ್ದ ಆಕಳು ಕರು ಅರಣ್ಯದಲ್ಲಿ ಹುಡುಕುತ್ತಿದ್ದಾಗ ಮೃತದೇಹ ಕಂಡುಬಂದಿದೆ ಮೃತ ಶರೀರ ಹಾಗೂ ಸುತ್ತಮುತ್ತಲೂ ಕರಕಲು ಸ್ಥಿತಿಯಲ್ಲಿದ್ದುದರಿಂದ ಸಿಡಿಲು ಬಡಿದು ಮೃತಪಟ್ಟಿರಬಹುದೆಂದು ಗ್ರಾಮಸ್ಥರು ಶಂಕಿಸಿದ್ದು ಮರಣೋತ್ತರ ವರದಿ ಹಾಗೂ ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

Malnad Times

Recent Posts

ಸೊರಬ ಮತಗಟ್ಟೆ ಸಂಖ್ಯೆ 159 ರಲ್ಲಿ ಕೈಕೊಟ್ಟ ಮತಯಂತ್ರ, ಸ್ಥಗಿತಗೊಂಡ ಮತದಾನ

ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…

2 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಬೆಳಗ್ಗೆ 9 ಗಂಟೆಯವರೆಗೆ ಶೇ. 11.39 ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…

2 hours ago

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

5 hours ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

16 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

18 hours ago