SHIVAMOGGA ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ನಗರದಿಂದ 9 ಕಿ.ಮೀ. ದೂರದಲ್ಲಿರುವ ಪುರದಾಳು ಗ್ರಾಮದಲ್ಲಿ ನಡೆದಿದೆ.


ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ಜಮೀನಿಗೆ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

ಕೂಡಿ ಗ್ರಾಮಕ್ಕೂ ಲಗ್ಗೆ ಇಟ್ಟ ಆನೆಗಳು !
ಇನ್ನೂ ಕಳೆದ ರಾತ್ರಿ ಶಿವಮೊಗ್ಗ ತಾಲೂಕಿನ ಕೂಡಿ ಗ್ರಾಮದ ಕಿರುವಾಸೆ ನಾರಾಯಣಪ್ಪ ಜಮೀನಿಗೆ ಸುಮಾರು 2 ರಿಂದ 3 ಕಾಡಾನೆಗಳು ದಾಳಿ ಮಾಡಿ ಜೋಳ ಮತ್ತು ಅಡಿಕೆ ಗಿಡಗಳನ್ನು ತಿಂದು ನಾಶ ಮಾಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.



ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.