ಹೊಸನಗರ

ಸಿ.ಟಿ. ರವಿ ಹೇಳಿಕೆ ವಿವಾದ – ಸವಿತಾ ಸಮಾಜ ಕಿಡಿ ; ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಚಳವಳಿ ಎಚ್ಚರಿಕೆ

ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ಸವಿತಾ ಸಮಾಜದ ಸದಸ್ಯರ ಕುರಿತು ಅವಹೇಳನಕಾರಿ ಪದ ಬಳಸಿರುವ ಆರೋಪದ ಹಿನ್ನೆಲೆ, ಸವಿತಾ ಸಮಾಜದ ಸದಸ್ಯರು ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಮಾಜದ ಅಧ್ಯಕ್ಷ ಸಿದ್ದೇಶ್ ಭಂಡಾರಿ ಮಾತನಾಡುತ್ತಾ, “ಒಂದು ಜನಾಂಗದ ಗೌರವಕ್ಕೆ ಧಕ್ಕೆಯಾದಂತೆ ಮಾಜಿ ಸಚಿವರು ಹೇಳಿಕೆ ನೀಡಿರುವುದು ಖಂಡನೀಯ. ಸಿ.ಟಿ. ರವಿ ಅವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಗೆ ಸಿದ್ಧರಾಗಿದ್ದೇವೆ” ಎಂದು ಎಚ್ಚರಿಕೆ ನೀಡಿದರು.

ಸಮಾಜದ ಪ್ರತಿನಿಧಿಗಳು ನಾಡಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸಿ.ಟಿ. ರವಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. “ಈ ರೀತಿಯ ಮಾತುಗಳು ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆಯುಂಟುಮಾಡುತ್ತವೆ,” ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಸವಿತಾ ಸಮಾಜದ ಕಾರ್ಯದರ್ಶಿ ಸುನೀಲ್‌ಕುಮಾರ್ ವೈ.ಎಸ್., ಪದಾಧಿಕಾರಿಗಳಾದ ಕೆ.ಎನ್. ಮಂಜುನಾಥ್, ಬಾಲರಾಜ್, ರಾಜೇಶ್, ಅರುಣ, ವಾಸು, ಸತೀಶ್, ಚಿರಂತ್, ಪಾಂಡುರಂಗ, ಮಂಜುನಾಥ್ ಬೈರಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!