Kaduru | ಮರವೇರಿ (Tree) ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ (Current Shocked) ತಗುಲಿ ಏಳನೇ ತರಗತಿ ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ (School)ಯ ಆವರಣದಲ್ಲಿ ನಡೆದಿದೆ.
Read More: Hosanagara ಹೊಸನಗರದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಯಾವಾಗ ?
ಆಕಾಶ್ (13) ಮೃತ ದುರ್ದೈವಿ. ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದಲ್ಲಿರುವ ನೇರಳೆ ಮರಕ್ಕೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದಾರೆ ಮಳೆನಾಡಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಮರ ಜಾರುತ್ತಿತ್ತು ಹಾಗೆ ಮರವೇರಿದ್ದ ಆಕಾಶ್ ಕಾಲು ಜಾರಿದೆ ಈ ವೇಳೆ ಆಧಾರಕ್ಕೆಂದು ಅಲ್ಲೇ ಹಾದು ಹೋದ ವಿದ್ಯುತ್ ತಂತಿ ಹಿಡಿದಿದ್ದಾನೆ, ಈ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಕೆಳಗೆ ಬಿದ್ದಿದ್ದಾನೆ ಇದನ್ನು ಕಂಡ ಇತರ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವನ್ನಪ್ಪಿದ್ದಾನೆ.
ಈ ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More: Bakrid 2024 | ಸೌಹಾರ್ಧಯುತವಾಗಿ ಬಕ್ರೀದ್ ಹಬ್ಬ ಆಚರಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಮನವಿ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?