RIPPONPETE | ಕರುವನ್ನು ಮೇಯಲು ಬಿಡಲು ಹೋಗುವಾಗ ಬೇಲಿಯಲ್ಲಿನ ವಿದ್ಯುತ್ ಹರಿದು ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ ಘಟನೆ ಗವಟೂರು ಗ್ರಾಮದ ಮಲ್ಲಾಪುರದಲ್ಲಿ ನಡೆದಿದೆ.
ವಿದ್ಯುತ್ ಪಂಪ್‌ಸೆಟ್‌ಗೆ ತಾತ್ಕಾಲಿಕವಾಗಿ ಅಳವಡಿಸಲಾದ ವಯರ್ ಅನ್ನು ಬೇಲಿ ಕಂಬಕ್ಕೆ ಸುತ್ತಿಡಲಾಗಿದ್ದು ಇದು ಮುಳ್ಳು ತಂತಿ ಬೇಲಿಗೆ ತಾಕಿದ್ದರ ಪರಿಣಾಮದಿಂದಾಗಿ ಕರು ಹೊಡೆಯಲು ಹೋದ ವೃದ್ಧೆ ಬೇಲಿ ಸ್ಪರ್ಶಿಸಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಮೃತ ವೃದ್ಧೆ ಮಲ್ಲಾಪುರ ಪಾರ್ವತಮ್ಮ ಗಂಗಾಧರಯ್ಯ (67) ಎಂದು ಗುರುತಿಸಲಾಗಿದೆ. ಮೃತರಿಗೆ ಇಬ್ಬರು ಪುತ್ತರಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವೀಣ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಾವಿಗೆ ಹಾರಿ ಆತ್ಮಹತ್ಯೆ !
RIPPONPETE | ಇಲ್ಲಿಗೆ ಸಮೀಪದ ಮಾದಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ನಾಲ್ಕು ವರ್ಷದ ಹಿಂದೆ ಕೊರೊನಾ ಕಾಯಿಲೆಯಿಂದ ಸಾವನ್ನಪ್ಪಿದ ತನ್ನ ಪತಿಯ ಕೊರಗಿನಿಂದಾಗಿ ಮಾದಾಪುರ ವಾಸಿ ಸಾಹಿನಾಬಾನು ಎಂಬ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.