ಶಿವಮೊಗ್ಗ

ಮಲೆನಾಡಿನಲ್ಲಿ ದಸರಾ ಸಂಭ್ರಮ: ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಜೋರಾದ ಹಬ್ಬದ ಖರೀದಿ

Shivamogga, the gateway to the Malenadu region, is all set for the observance of Ayudha Puja and Vijayadashami—key highlights of the Dasara festival.

Shivamogga Dasara

ಶಿವಮೊಗ್ಗ: ನಾಡಹಬ್ಬ ದಸರಾದ ಪ್ರಮುಖ ಘಟ್ಟವಾದ ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸಜ್ಜಾಗಿದ್ದು, ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹಬ್ಬದ ಮುನ್ನಾದಿನವಾದ ಇಂದು ಅಗತ್ಯ ವಸ್ತುಗಳ ಖರೀದಿಗಾಗಿ ಸಾರ್ವಜನಿಕರು ಮಾರುಕಟ್ಟೆಗಳತ್ತ ಮುಖ ಮಾಡಿದ್ದು, ವ್ಯಾಪಾರ-ವಹಿವಾಟು ಚುರುಕುಗೊಂಡಿದೆ.

WhatsApp Group Join Now
Telegram Group Join Now
Instagram Group Join Now

ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿ ಬಜಾರ್, ನೆಹರೂ ರಸ್ತೆ, ದುರ್ಗಿಗುಡಿ ಸೇರಿದಂತೆ ಗೋಪಾಳ ಮತ್ತು ವಿನೋಬನಗರದ ಬೀದಿಗಳಲ್ಲಿ ಜನಜಂಗುಳಿ ಕಂಡುಬರುತ್ತಿದೆ.

ಅಂಗಡಿ-ಮುಂಗಟ್ಟು ಹಾಗೂ ವಾಹನಗಳ ಪೂಜೆಗೆ ಅಲಂಕಾರಿಕ ವಸ್ತುಗಳು, ಬಾಳೆಕಂದು, ಬೂದುಗುಂಬಳಕಾಯಿ ಹಾಗೂ ವಿವಿಧ ಬಗೆಯ ಹೂವುಗಳನ್ನು ಕೊಳ್ಳಲು ಗ್ರಾಹಕರು ಮುಗಿಬಿದ್ದಿದ್ದಾರೆ. ವಿಶೇಷವಾಗಿ ಸೇವಂತಿಗೆ, ಚಂಡುಹೂವು ಮತ್ತು ಕನಕಾಂಬರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ.

ಹಬ್ಬದ ಹಿನ್ನೆಲೆಯಲ್ಲಿ ಹೂವು-ಹಣ್ಣುಗಳ ಧಾರಣೆ ಗಗನಕ್ಕೇರಿದೆ. ಮಾರುಕಟ್ಟೆಯಲ್ಲಿ ಮಲ್ಲಿಗೆ ಹಾಗೂ ಕನಕಾಂಬರ ಹೂವಿನ ಬೆಲೆ ಕೆ.ಜಿ.ಗೆ ₹800ರ ಆಸುಪಾಸಿನಲ್ಲಿದ್ದರೆ, ಸೇವಂತಿಗೆ ಮತ್ತು ಗುಲಾಬಿ ಹೂವುಗಳು ಕೆ.ಜಿ.ಗೆ ₹400 ದಾಟಿವೆ. ಇನ್ನು ಆಯುಧ ಪೂಜೆಯ ಪ್ರಮುಖ ಆಕರ್ಷಣೆಯಾದ ಬೂದುಗುಂಬಳಕಾಯಿ ಗಾತ್ರಕ್ಕೆ ತಕ್ಕಂತೆ ₹100 ರಿಂದ ₹200 ರವರೆಗೆ ಮಾರಾಟವಾಗುತ್ತಿದೆ. ಇಷ್ಟೆಲ್ಲಾ ಬೆಲೆ ಏರಿಕೆಯ ನಡುವೆಯೂ ಸೇಬು, ಬಾಳೆಹಣ್ಣು, ನಿಂಬೆಹಣ್ಣು ಹಾಗೂ ದಿನಸಿ ಸಾಮಗ್ರಿಗಳನ್ನು ಕೊಳ್ಳಲು ಜನರು ಹಿಂದೇಟು ಹಾಕದೆ, ಸಂಭ್ರಮದಿಂದಲೇ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!